ಪಾಕಿಸ್ತಾನ ನೀಡಿದ ಮಾಹಿತಿ ಆಧರಿಸಿ 2019ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸಿದ್ದ ಜಾಲವೊಂದನ್ನು ಬೇಧಿಸಿರುವ ಸಿಬಿಐ, ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದೆ ಹಾಗೂ ಹಲವರನ್ನು ಬಂಧಿಸಿದೆ. ತಮ್ಮ ಎಫ್‌ಐಆರ್ ಪ್ರತಿಯಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿವರಿಸಿದ ಸಿಬಿಐ, ಈ ಪ್ರಕರಣ ಸಂಬಂಧ ದಿಲ್ಲಿ, ರಾಜಸ್ಥಾನ್ ಹಾಗೂ ಹೈದರಾಬಾದ್ ನಗರಗಳಲ್ಲಿ ಇನ್ನಷ್ಟು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/X0Pq3dp