ಗ್ರಾಮಾಂತರ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಭರ್ಜರಿಯಾಗಿತ್ತು. ಇದರ ಪರಿಣಾಮವಾಗಿ ಮೇ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ಪ್ರಸಕ್ತ ವರ್ಷದ ಕೃಷಿ ಚಟುವಟಿಕೆ ಏಪ್ರಿಲ್ ತಿಂಗಳಲ್ಲಿ ಅರ್ಧದಲ್ಲಿಯೇ ಚುರುಕುಗೊಂಡಿತ್ತು. ಈ ಬಾರಿ ಮುಂಗಾರು ಆಶಾದಾಯಕವಾಗಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಬಿತ್ತನೆ ಸಿದ್ಧತೆ, ಕೃಷಿ ಚಟುವಟಿಕೆ ಚುರುಕಾಗಿದೆ. ಭೂಮಿ ಉಳುಮೆ ಹಾಗೂ ಕೃಷಿ ಸಿದ್ಧತೆಯಲ್ಲಿ ರೈತರು ಬ್ಯುಸಿಯಾಗಿದ್ದಾರೆ. ಜಿಲ್ಲೆಯಲ್ಲಿ 69,600 ಹೆಕ್ಟೇರ್ ಬಿತ್ತನೆ ಗುರಿಯನ್ನು ಹೊಂದಲಾಗಿದೆ. 4054 ಕ್ವಿಂಟಲ್ ಬಿತ್ತನೆ ಗುರಿಯಿದೆ. ಇದರಲ್ಲಿ ಬಹುಪಾಲು ರಾಗಿ ಆಗಿದ್ದು 56,570 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ.
from India & World News in Kannada | VK Polls https://ift.tt/iOdnNzg