ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ, ಫೋಟೋ ನಿರ್ಬಂಧ: ತಡರಾತ್ರಿ ಆದೇಶ ಹಿಂಪಡೆದ ಸರ್ಕಾರ..!

ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ, ಫೋಟೋ ನಿರ್ಬಂಧ ಹೇರಿರುವ ಆದೇಶವನ್ನು ತಡರಾತ್ರಿ ರಾಜ್ಯ ಸರ್ಕಾರ ಹಿಂಪಡೆದಿದೆ. ಫೋಟೋ, ವಿಡಿಯೋ ಬ್ಯಾನ್ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿತ್ತು. ವಿಡಿಯೋ, ಫೋಟೋ ಬ್ಯಾನ್ ಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿಯಲ್ಲಿ ಬ್ಯಾನ್ ಆದೇಶವನ್ನು ವಾಪಸ್ ಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಬ್ಯಾನ್ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಭ್ರಷ್ಟಾಚಾರಿ ವಿರೋಧಿ ಹೋರಾಟಗಾರರಿಂದ‌ ಭಾರೀ ಆಕ್ಷೇಪ ವ್ಯಕ್ತವಾಗಿತ್ತು.

from India & World News in Kannada | VK Polls https://ift.tt/NWSuTeI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...