ಜಿಲ್ಲಾದ್ಯಂತ ಸರಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಮಧ್ಯಾಹ್ನ ಉಪಾಹಾರ ಯೋಜನೆ) ಅಡಿ ಪೌಷ್ಟಿಕ ಆಹಾರವಾಗಿ ಬೇಯಿಸಿದ ಕೋಳಿ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ನೀಡುವ ಕಾರ್ಯ ಶುರುವಾಗಿದೆ. ಶೇ.70ರಷ್ಟು ಮಕ್ಕಳು ಕೋಳಿ ಮೊಟ್ಟೆ ಆಯ್ಕೆ ಮಾಡಿಕೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಪೌಷ್ಟಿಕತೆ ನಿವಾರಣೆಗಾಗಿ ಮೊದಲ ಹಂತದಲ್ಲಿ ಉತ್ತರ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೋಳಿ ಮೊಟ್ಟೆ ವಿತರಣೆ ಶುರುವಾದಾಗ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಕೆಲವರು ಶಾಲೆಗಳನ್ನೇ ಬಿಟ್ಟು ತೆರಳಿದ್ದರು.
from India & World News in Kannada | VK Polls https://ift.tt/iqB3cry