ನಗರದ ಜಿಲ್ಲಾ ಕಾರಾಗೃಹದ ಕೈದಿ ಮಂಜುನಾಥ ಕುರಿ (28) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಜೈಲಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಮಂಜುನಾಥ ಭಾಗವಹಿಸಿದ್ದರ. ಕಾರ್ಯಕ್ರಮ ಮುಗಿದ ನಂತರ ಬ್ಯಾರೆಕ್‌ಗೆ ತೆರಳಿ, ಕಿಟಕಿಗೆ ಟವೆಲ್‌ನಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಧೋಳ ತಾಲೂಕಿನ ಮಲ್ಲಾಪೂರ ಗ್ರಾಮದ ಈತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಕಳೆದ ಐದು ತಿಂಗಳಿನಿಂದ ಜೈಲಿನಲ್ಲಿದ್ದ ಈತ ಜಾಮೀನು ದೊರೆಯದ ಕಾರಣ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.
from India & World News in Kannada | VK Polls https://ift.tt/dTu9BYV