ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆ ಮೂಡಿಸಿದ್ದ ಡಿಸಿ ಆರ್.ಲತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯಕ್ಕೆ ನಂ.1 ಸ್ಥಾನಕ್ಕೇರಲು ನಾನಾ ಪ್ರಯತ್ನ ಆರಂಭಿಸಿದ್ದಾರೆ. ಜಿಲ್ಲಾಪಂಚಾಯಿತಿ ವ್ಯಾಪ್ತಿಯ ಎಲ್ಲಾ ಇಲಾಖೆ ಉಪನಿರ್ದೇಶಕರಿಗೆ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲೆಯಲ್ಲೊಂದು ಶಾಲೆ ದತ್ತು ಪಡೆಯಲು ಸೂಚಿಸುತ್ತಿದ್ದಾರೆ. ಅಧಿಕಾರಿಗಳು ಆಗಾಗ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ ಪರಿಶೀಲಿಸಲು ವ್ಯವಸ್ಥೆ ರೂಪಿಸಲಾಗಿದೆ.
from India & World News in Kannada | VK Polls https://ift.tt/i6DPobs