ಐಐಟಿ ಸ್ಥಾಪನೆಗೆ ಗುರುತಿಸಲಾಗಿರುವ ಸಾವಿರ ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕೆ ಬಳಸಿಕೊಳ್ಳಲು 20 ಕೋಟಿ ರೂ. ಪಡೆಯಲಾಗಿದೆ ಎಂದು ಗುತ್ತಿಗೆದಾರರೇ ನಮಗೆ ತಿಳಿಸಿದ್ದಾರೆ. ಈ ಹಣದಲ್ಲಿ ಬಿಜೆಪಿ ಮುಖಂಡರು ಹಾಗೂ ಇತರರಿಗೆ ಸಂದಾಯ ಮಾಡಿರುವ ಬಗ್ಗೆ ಅನುಮಾನವಿದೆ ಎಂದು ಆರೋಪಿಸಿದ ಎಚ್‌ಡಿ ರೇವಣ್ಣ, ಐಐಟಿ ಜಾಗವನ್ನು ಯಾವುದೇ ಕಾರಣಕ್ಕೂ ಕೈಗಾರಿಕಾ ಅಭಿವೃದ್ಧಿ ಉದ್ದೇಶಕ್ಕೆ ಬಳಸಬಾರದು ಎಂದು ಮಾನವ ಸಂಪನ್ಮೂಲ ಸಚಿವರು, ಸಿಎಂಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪತ್ರ ಬರೆದಿದ್ದಾರೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
from India & World News in Kannada | VK Polls https://ift.tt/AzN6eRv