India vs Bangladesh Series 2022: ಟೀಮ್ ಇಂಡಿಯಾ ಬರೋಬ್ಬರಿ 7 ವರ್ಷಗಳ ಬಳಿಕ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲು ಸಜ್ಜಾಗಿದೆ. ಇದೇ ವರ್ಷ ಡಿಸೆಂಬರ್‌ನಲ್ಲಿ ಭಾರತ ತಂಡ ಬಾಂಗ್ಲಾದೇಶಕ್ಕೆ ತೆರಳಲಿದ್ದು, ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಮ್ ಇಂಡಿಯಾ ಈ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಡಿಸೆಂಬರ್ 4ರಂದು ಈ ಸರಣಿ ಶುರುವಾಗಲಿದ್ದು, ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಅಧಿಕೃತ ಮಾಹಿತಿ ನೀಡಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/JzYK0ae