T20 World cup 2022: ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯುತ್ತಿರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅತ್ಯಂತ ಕುತೂಹಲಭರಿತವಾಗಿ ಸಾಗುತ್ತಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸತತ ಎರಡು ಪಂದ್ಯಗಳಲ್ಲಿ ಗೆದ್ದು ಭಾರತ, ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಅಂದಹಾಗೆ ಅದ್ಭುತ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಈ ಎರಡೂ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಅತ್ಯುತ್ತಮ ಫಾರ್ಮ್‌ನಲ್ಲಿರುವ ಅವರು ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿರುವ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸುವ ಸಾಧ್ಯತೆ ಇದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/wCOqm7g