ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಅವಹೇಳನಕಾರಿ ಹೇಳಿಕೆ ವಿರುದ್ಧ ತಿರುಗಿಬಿದ್ದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ನಾನಂತಹ ಪದಪ್ರಯೋಗ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ನಾನು ಜನರಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಹರಿಪ್ರಸಾದ ಎಲ್ಲಿ ಆಯ್ಕೆಯಾಗಿದ್ದಾರೆ ಎಂದು ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ನವರು ಮಾಡಿದ ದ್ರೋಹದಿಂದ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬಂದವರು ನಾವು. ಆತ್ಮಗೌರವ ಇರುವಂಥವರು ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
from India & World News in Kannada | VK Polls https://ift.tt/pXYzAHi