ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ರಾಜ್ಯ ಬಿಜೆಪಿ ನಾಯಕರಿಗೆ ಗಂಡಸ್ತನವಿಲ್ಲ ಹೇಳಿಕೆಗೆ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದಾರೆ. ಈ ಬಗ್ಗೆ ಮಂಗಳವಾರ ಮಂಡ್ಯದಲ್ಲಿ ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ನಮ್ಮ ರಾಷ್ಟ್ರ ನಾಯಕರು ರಾಜ್ಯ ಆಗಮಿಸುವುದರಿಂದ ಭಯ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಕರ್ನಾಟಕದವರಿಗೆ ಅಪಾರ ಪ್ರೀತಿ ಇದೆ. ಆರ್ಟಿಕಲ್ 370 ಅನ್ನು ವಜಾ ಮಾಡಿದ ಜನರ ಮನಸ್ಸಿಗೆ ತಟ್ಟಿದೆ. ಈ ಅಭಿಮಾನ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತಿಳಿದಿಲ್ಲ ಹೀಗಾಗಿ ಏನೇನೋ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದರು.
from India & World News in Kannada | VK Polls https://ift.tt/JHg8QxO