ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರಿನ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಮತಿ ಮಹಿಳಾ ಕ್ಲಿನಿಕ್ ಸ್ಥಾಪಿಸಲಾಗಿದೆ. ಆಯುಷ್ಮತಿ ಮಹಿಳಾ ಕ್ಲಿನಿಕ್‌ನಲ್ಲಿ ವಾರದಲ್ಲಿ ದಿನಕ್ಕೊಂದು ವೈದ್ಯರು ಮಹಿಳೆಯರಿಗೆ ಸೇವೆ ಒದಗಿಸಲಿದ್ದಾರೆ. ನುರಿತ ಸ್ತ್ರಿರೋಗ ತಜ್ಞರು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆ, ಚಿಕಿತ್ಸೆ ಮತ್ತು ಆರೋಗ್ಯದ ಕುರಿತಾಗಿ ಸಲಹೆ ಸೂಚನೆಯನ್ನು ನೀಡುತ್ತಾರೆ. ಸಣ್ಣವರಿಂದ ಹಿಡಿದು ದೊಡ್ಡವರಿಗೂ ಈ ಕ್ಲಿನಿಕ್‌ನಲ್ಲಿ ಆರೋಗ್ಯ ಸೇವೆ ದೊರೆಯಲಿದೆ. ನಗರದ ಆರೋಗ್ಯ ಕೇಂದ್ರಗಳಲ್ಲಿಯೇ ಸೇವೆಗಳು ಸಿಗಬೇಕು ಎನ್ನುವ ಉದ್ದೇಶದಿಂದ ಆಯುಷ್ಮತಿ ಮಹಿಳಾ ಕ್ಲಿನಿಕ್ ಸ್ಥಾಪಿಸಲಾಗಿದೆ.
from India & World News in Kannada | VK Polls https://ift.tt/3MwzDt7