BS Yediyurappa-ವೀರಶೈವ ಮತ ವಿಭಜಿಸಲು ಕಾಂಗ್ರೆಸ್‌ ನಿಂದ ಅಪಪ್ರಚಾರ; ಪಕ್ಷ ನನ್ನನ್ನು ನಿರ್ಲಕ್ಷಿಸಿಲ್ಲ

ತಮ್ಮನ್ನು ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂಬುದು ಸುಳ್ಳು. ವೀರಶೈವರ ಮತಗಳನ್ನು ವಿಭಜಿಸುವ ಸಲುವಾಗಿ ಕಾಂಗ್ರೆಸ್ ಈ ರೀತಿಯಾಗಿ ಅಪಪ್ರಚಾರ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರುವೇಕೆರೆಯಲ್ಲಿ ಮಂಗಳವಾರ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬೇರೆಯವರಿಗೂ ಅವಕಾಶ ಸಿಗಬೇಕೆಂಬ ದೃಷ್ಟಿಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡಿದ್ದು ನಾವೆಲ್ಲರೂ ಒಟ್ಟಾಗಿದ್ದೇವೆ. ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದು ವೀರಶೈವರು ಕಾಂಗ್ರೆಸ್‌ ಕುತಂತ್ರಕ್ಕೆ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/d2oP340

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...