ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟಗೊಂಡಿದೆ. ಬಾಗಲಕೋಟೆ ಜಿಲ್ಲೆಯವರಾದ ಮಾಜಿ ಸಚಿವ ಎಸ್. ಆರ್. ಪಾಟೀಲ್ ಅವರಿಗೆ ಯಾವುದೇ ಕಾರಣಕ್ಕೂ ದೇವರ ಹಿಪ್ಪರಗಿಯಿಂದ ಕಾಂಗ್ರೆಸ್ ಟಿಕೆಟ್ ನೀಡಬಾರದೆಂದು 9 ಮಂದಿ ಆಕಾಂಕ್ಷಿಗಳು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ. ನಮ್ಮ 9 ಮಂದಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುತ್ತೇವೆ. ಎಸ್.ಆರ್. ಪಾಟೀಲ್ ಅವರಿಗೆ ಟಿಕೆಟ್ ಘೋಷಿಸಿದರೆ ನಮ್ಮ ಮುಂದಿನ ನಡೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/KCQE3tg