UP Warriorz vs Royal Challengers Bangalore Highlights: ಸತತ ಐದು ಸೋಲುಂಡು ಟ್ರೋಫಿ ಗೆಲುವಿನ ರೇಸ್‌ನಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಸಾಲು ಸಾಲು ಸೋಲಿನಿಂದ ಕಂಗಾಲಾಗಿದ್ದ ಆರ್‌ಸಿಬಿ ತಂಡ ಬುಧವಾರ ನಡೆದ ಪಂದ್ಯದಲ್ಲಿ ಯು.ಪಿ ವಾರಿಯರ್ಸ್ ತಂಡವನ್ನು 5 ವಿಕೆಟ್‌ಗಳಿಂದ ಬಗ್ಗುಬಡಿದು ಲೀಗ್‌ನಲ್ಲಿ ತನ್ನ ಮೊದಲ ಗೆಲುವನ್ನು ಸಂಪಾದಿಸಿದೆ. ಎಲೀಸ್ ಪೆರಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಬಲವಾದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/BsDkgLp