ಕಾಂಗ್ರೆಸಿಗರನ್ನು ಯಾರೂ ನಂಬುತ್ತಿಲ್ಲ, ಅವರ ಗ್ಯಾರಂಟಿ ಕಾರ್ಡ್‌ಗೆ ವಾರಂಟಿ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್ ಮತದಾರರಿಗೆ ನೀಡಿರುವ ಗ್ಯಾರೆಂಟಿ ಕಾರ್ಡ್ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದಕ್ಕೆ ವಾರೆಂಟಿ ಇಲ್ಲ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಭಾನುವಾರ ಪಕ್ಷದ ಕಾರ್ಯಕ್ರಮದಲ್ಲಿ ಅವರು ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಗ್ಯಾರೆಂಟಿ ಕಾರ್ಡ್ ಕೊಡುತ್ತಿರುವ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದೇ ಆಗಿದೆ. ಪ್ರಧಾನಿ ಮೋದಿ ಮತ್ತು ಬಿ.ಎಸ್.ಯಡಿಯೂರಪ್ಪ ನವರು ಜಾರಿಗೆ ತಂದಿರುವ ಜನಪರ ಯೋಜನೆಗಳಿಗೆ ಯಾವುದೇ ಗ್ಯಾರೆಂಟಿ ಕಾರ್ಡ್ ನೀಡಿಲ್ಲ. ಇದನ್ನು ಕಾರ್ಯಕರ್ತರು ಮತದಾರರಿಗೆ ತಿಳಿಸಬೇಕು ಎಂದು ತಿಳಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/v41rY5g

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...