ಕ್ರೈಸ್ಟ್ ಕಾಲೇಜ್ ಆಫ್ ಸೈನ್ಸ್ ಆ್ಯಂಡ್ ಕಾಮರ್ಸ್ ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಪ್ರಯುಕ್ತ ಪ್ಲಾಸ್ಟಿಕ್ ನಿರ್ಮೂಲನೆ ಮತ್ತು ಪರಿಸರ ಸಂರಕ್ಷಣೆ ಕುರಿತಾಗಿ 271 ಭಾಷೆಗಳಲ್ಲಿ ಘೋಷವಾಕ್ಯಗಳನ್ನು ರಚಿಸಿದ್ದು ಆ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರವಾಗಿದೆ. ಕಾಲೇಜಿನ 271 ವಿದ್ಯಾರ್ಥಿಗಳು ಸೇರಿ ಪ್ರಪಂಚದ 271 ಭಾಷೆಗಳಲ್ಲಿ ಈ ಸ್ಲೋಗನ್ ಗಳನ್ನು ರಚಿಸಿದ್ದು, ಇದು ದೇಶದಲ್ಲೇ ಪ್ರಥಮ ಹಾಗೂ ವಿಭಿನ್ನ ಪ್ರಯತ್ನವಾಗಿದೆ. ಈ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನ ಪದಕ ಹಾಗೂ ಪ್ರಶಸ್ತಿಯನ್ನು ಕಾಲೇಜು ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/06aM3NZ