ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆಂಬರ್ಥದಲ್ಲಿರುವ ಪತ್ರ ನಕಲಿ: ಸಿದ್ದರಾಮಯ್ಯ ಸ್ಪಷ್ಟನೆ

ಮಂಡ್ಯದ 7 ಮಂದಿ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರ ನಕಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದರ ಬಗ್ಗೆ ಮಂಡ್ಯದ ಜಂಟಿ ಕೃಷಿ ನಿರ್ದೇಶಕರೇ ತಿಳಿಸಿದ್ದು, ಆ ಪತ್ರದಲ್ಲಿ ಉಲ್ಲೇಖವಾಗಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿ ಇಲ್ಲ ಎಂಬುದಾಗಿ ತಿಳಿಸಿರುವುದಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿರುವ ಅವರು, ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ ಅಥವಾ ನಿಮ್ಮ ``ಬ್ರದರೋ'' ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರ ಕಾಲೆಳೆದಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/GIM7bDt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...